10ನೇ ತರಗತಿ ಗಣಿತ ವೃತ್ತಗಳಿಗೆ ಸಂಬಂಧಿಸಿದ ವಿಸ್ತೀರ್ಣಗಳು ನೋಟ್ಸ್‌ | 10th Standard Vruttagalige Sambandhisida Vistirnagalu Maths Notes

Vruttagalige Sambandhisida Vistirnagalu

10th Standard Vruttagalige Sambandhisida Vistirnagalu Maths Notes Question Answer Guide Extract Mcq Pdf Download in Kannada Medium 2025, 10ನೇ ತರಗತಿ ಗಣಿತ ವೃತ್ತಗಳಿಗೆ ಸಂಬಂಧಿಸಿದ ವಿಸ್ತೀರ್ಣಗಳು ಗಣಿತ ನೋಟ್ಸ್‌ ಪ್ರಶ್ನೋತ್ತರಗಳು, 10th Maths vruttagalige sambandisida vistirnagalu in kannada, ವೃತ್ತಗಳಿಗೆ ಸಂಬಂಧಿಸಿದ ವಿಸ್ತೀರ್ಣಗಳು 10ನೇ ತರಗತಿ, vruttagalige sambandisida vistirnagalu 5.2 in kannada, kseeb solutions for class 10 maths chapter 5 notes pdf, 10th standard maths 5th lesson notes state syllabus, 10th standard maths notes, state board 10th class maths notes pdf,10ನೇ ತರಗತಿ ಗಣಿತ ನೋಟ್ಸ್ 10th maths 5.1 in kannada 10th Class maths 5.3 in kannada

Vruttagalige Sambandhisida Vistirnagalu

10ನೇ ತರಗತಿ ಗಣಿತ ವೃತ್ತಗಳಿಗೆ ಸಂಬಂಧಿಸಿದ ವಿಸ್ತೀರ್ಣಗಳು ನೋಟ್ಸ್‌

1. ಎರಡು ವೃತ್ತಗಳ ತ್ರಿಜ್ಯಗಳು ಕ್ರಮವಾಗಿ 19 cm ಮತ್ತು 9 cm ಇದೆ. ಈ ಎರಡು ವೃತ್ತಗಳ ಪರಿಧಿಗಳ ಮೊತ್ತಕ್ಕೆ ಸಮನಾದ ವೃತ್ತ ಪರಿಧಿಯನ್ನು ಹೊಂದಿರುವ ಮತ್ತೊಂದು ವೃತ್ತದ ತ್ರಿಜ್ಯವನ್ನು ಕಂಡುಹಿಡಿಯಿರಿ.

r1 = 19 cm ಮತ್ತು r2 = 9 cm ಎರಡು ವೃತ್ತಗಳ ಪರಿಧಿಗಳ ಮೊತ್ತಕ್ಕೆ ಸಮನಾದ ವೃತ್ತ ಪರಿಧಿಯನ್ನು ಹೊಂದಿರುವ ಮತ್ತೊಂದು ವೃತ್ತದ ತ್ರಿಜ್ಯವು R = ?

2. ಎರಡು ವೃತ್ತಗಳ ತ್ರಿಜ್ಯಗಳು ಕ್ರಮವಾಗಿ 8 cm ಮತ್ತು 6 cm ಆಗಿವೆ. ಈ ಎರಡು ವೃತ್ತಗಳ ವಿಸ್ತೀರ್ಣದ ಮೊತ್ತಕ್ಕೆ ಸಮನಾದ ವಿಸ್ತೀರ್ಣವನ್ನು ಹೊಂದಿರುವ ಮತ್ತೊಂದು ವೃತ್ತದ ತ್ರಿಜ್ಯವನ್ನು ಕಂಡುಹಿಡಿಯಿರಿ.

3. ಕೇಂದ್ರದಿಂದ ಆರಂಭಿಸಿ ಬಂಗಾರ, ಕೆಂಪು, ನೀಲಿ, ಕಪ್ಪು ಮತ್ತು ಬಿಳಿ ಎಂಬ ಐದು ಅಂಕಗಳಿಕೆಯ ವಲಯಗಳನ್ನು ಒಳಗೊಂಡಿರುವ ಬಾಣದ ಗುರಿಫಲಕವನ್ನು ಚಿತ್ರ 5.3 ರಲ್ಲಿ ತೋರಿಸಲಾಗಿದೆ. ಬಂಗಾರ ವಲಯದ ವ್ಯಾಸವು 21cm ಆಗಿದ್ದು ನಂತರದ ಪ್ರತಿಯೊಂದು ವಲಯಗಳು 10.5cm ಅಗಲಗಳನ್ನು ಹೊಂದಿವೆ. ಈ ಐದು ಅಂಕಗಳಿಕೆಯ ವಲಯಗಳ ಪ್ರತಿಯೊಂದರ ಕಂಡುಹಿಡಿಯಿರಿ. ವಿಸ್ತೀರ್ಣವನ್ನು ಕಂಡುಹಿಡಿಯಿರಿ.

4. ಕಾರಿನ ಪ್ರತಿ ಚಕ್ರದ ವ್ಯಾಸ 80cm ಇದೆ. ಕಾರು ಪ್ರತಿ ಗಂಟೆಗೆ 60km ಜವದಲ್ಲಿ ಚಲಿಸುವಾಗ ಪ್ರತಿ ಚಕ್ರವು 10 ನಿಮಿಷಗಳಲ್ಲಿ ಎಷ್ಟು ಸಂಪೂರ್ಣ ಸುತ್ತುಗಳನ್ನು ಸುತ್ತುತ್ತದೆ?

5. ಈ ಕೆಳಗಿನ ಉತ್ತರಗಳಲ್ಲಿ ಸರಿಯಾದ ಉತ್ತರಕ್ಕೆ ಗುರುತು ಹಾಕಿ ಮತ್ತು ನಿಮ್ಮ ಆಯ್ಕೆಯನ್ನು ಸಮರ್ಥಿಸಿ: ಒಂದು ವೃತ್ತದ ಸುತ್ತಳತೆ ಮತ್ತು ಅದರ ವಿಸ್ತೀರ್ಣವು ಸಾಂಖ್ಯಿಕವಾಗಿ ಸಮನಾಗಿದ್ದರೆ ಆ ವೃತ್ತದ ತ್ರಿಜ್ಯವು

(A) 2 ಮಾನಗಳು

(B) A ಮಾನಗಳು

(C) 4 ಮಾನಗಳು

(D) 7 ಮಾನಗಳು

ವೃತ್ತದ ಸುತ್ತಳತೆ = ವೃತ್ತದ ವಿಸ್ತೀರ್ಣ

1. ಒಂದು ವೃತ್ತದ ತ್ರಿಚ್ಯಾಂತರ ಖಂಡದ ತ್ರಿಜ್ಯವು 6 cm, ತ್ರಿಜ್ಯಾಂತರ ಖಂಡದ ಕೋನವು 60 deg ಆದರೆ ಅದರ ವಿಸ್ತೀರ್ಣವನ್ನು ಕಂಡುಹಿಡಿಯಿರಿ.

2. ಪರಿಧಿಯು 22 cm ಇರುವ ಒಂದು ವೃತ್ತ ಚತುರ್ಥಕ ಭಾಗದ ವಿಸ್ತೀರ್ಣವನ್ನು ಕಂಡುಹಿಡಿಯಿರಿ.

3. ಒಂದು ಗಡಿಯಾರದಲ್ಲಿ ನಿಮಿಷದ ಮುಳ್ಳಿನ ಉದ್ದವು 14 cm ಆಗಿದೆ. ಐದು ನಿಮಿಷದಲ್ಲಿ ಅದು ಕ್ರಮಿಸಿದ ವಿಸ್ತೀರ್ಣವನ್ನು ಕಂಡುಹಿಡಿಯಿರಿ.

4. 10cm ತ್ರಿಜ್ಯವುಳ್ಳ ವೃತ್ತದಲ್ಲಿನ ಒಂದು ಜ್ಯಾವು ವೃತ್ತಕೇಂದ್ರದಲ್ಲಿ ಲಂಬಕೋನವನ್ನುಂಟು ಮಾಡುತ್ತದೆ. ಜ್ಯಾದಿಂದ ಉಂಟಾದ (1) ಲಘುವೃತ್ತಖಂಡ (2) ಅಧಿಕ ತ್ರಿಜ್ಯಾಂತರ ಖಂಡಗಳ ವಿಸ್ತೀರ್ಣಗಳನ್ನು ಕಂಡುಹಿಡಿಯಿರಿ.

5. 21 cm ತ್ರಿಜ್ಯವಿರುವ ಒಂದು ವೃತ್ತದಲ್ಲಿ ಒಂದು ಕಂಸವು ವೃತ್ತಕೇಂದ್ರದಲ್ಲಿ 60° ಕೋನವನ್ನುಂಟು ಮಾಡುತ್ತದೆ.

(1) ಕಂಸದ ಉದ್ದ

(2) ಕಂಸದಿಂದ ಉಂಟಾದ ತ್ರಿಚ್ಯಾಂತರ ಖಂಡ.

(3) ಅನುರೂಪ ಜ್ಯಾದಿಂದ ಉಂಟಾದ ವೃತ್ತಖಂಡದ ವಿಸ್ತೀರ್ಣವನ್ನು ಕಂಡುಹಿಡಿಯಿರಿ.

6. 15 cm ತ್ರಿಜ್ಯವಿರುವ ಒಂದು ವೃತ್ತದ ಒಂದು ಜ್ಯಾವು ವೃತ್ತಕೇಂದ್ರದಲ್ಲಿ 600 ಕೋನವನ್ನುಂಟು ಮಾಡುತ್ತದೆ. ಜ್ಯಾದಿಂದ ಉಂಟಾದ ಲಘು ವೃತ್ತ ಖಂಡ ಮತ್ತು ಅಧಿಕ ವೃತ್ತಖಂಡ ವಿಸ್ತೀರ್ಣಗಳನ್ನು ಕಂಡುಹಿಡಿಯಿರಿ. ( π = 3.14 ಹಾಗೂ √3 = 1.73 ಎಂದು ಬಳಸಿ).

7. 12 cm ತ್ರಿಜ್ಯವಿರುವ ವೃತ್ತದಲ್ಲಿ ಒಂದು ಜ್ಯಾವು ಕೇಂದ್ರದಲ್ಲಿ 120° ಕೋನವನ್ನುಂಟುಮಾಡುತ್ತದೆ. ಉಂಟಾದ ವೃತ್ತ ಖಂಡದ ವಿಸ್ತೀರ್ಣವನ್ನು ಕಂಡುಹಿಡಿಯಿರಿ. (π = 3.14 ಹಾಗೂ √3 = 1.73 ಎಂದು ಬಳಸಿ).

8. 15 m ಬಾಹುವಿರುವ ಚೌಕಾಕಾರದ ಒಂದು ಹುಲ್ಲಿನ ಮೈದಾನದ ಮೂಲೆಯಲ್ಲಿರುವ ಒಂದು ಗೂಟಕ್ಕೆ ಕುದುರೆಯೊಂದನ್ನು 5 m ಉದ್ದದ ಹಗ್ಗದಿಂದ ಕಟ್ಟಿದೆ. (ಚಿತ್ರ 5.11 ನ್ನು ನೋಡಿ)

i) ಕುದುರೆಯು ಹುಲ್ಲನ್ನು ಮೇಯಬಹುದಾದ ಮೈದಾನದ ಭಾಗದ ವಿಸ್ತೀರ್ಣ.

ii) 5m ಹಗ್ಗದ ಬದಲಾಗಿ 10m ಹಗ್ಗ ಉಪಯೋಗಿಸಿದಲ್ಲಿ ಹೆಚ್ಚಾಗಿ ಮೇಯಬಹುದಾದ ಮೈದಾನದ ವಿಸ್ತೀರ್ಣವನ್ನು ಕಂಡುಹಿಡಿಯಿರಿ.

9. 35mm ವ್ಯಾಸವಿರುವ ವೃತ್ತಾಕಾರದ ಪದಕವನ್ನು ಬೆಳ್ಳಿ ತಂತಿಯಿಂದ ಮಾಡಿದೆ. ಬೆಳ್ಳಿ ತಂತಿಯ 5 ವ್ಯಾಸಗಳನ್ನು ಉಪಯೋಗಿಸಿ, ವೃತ್ತವನ್ನು ಸಮನಾದ 10 ತ್ರಿಜ್ಯಾಂತರ ಖಂಡಗಳಾಗಿ ಚಿತ್ರ 5.12ರಲ್ಲಿ ತೋರಿಸಿರುವಂತೆ ವಿಭಾಗಿಸಿದೆ.

i) ಬೇಕಾಗುವ ಬೆಳ್ಳಿ ತಂತಿಯ ಉದ್ದ

= 285 mm

ii) ಪದಕದಲ್ಲಿನ ಪ್ರತಿ ತ್ರಿಜ್ಯಾಂತರ ಕಂಡುಹಿಡಿಯಿರಿ. ಖಂಡದ ವಿಸ್ತೀರ್ಣವನ್ನು ಕಂಡುಹಿಡಿಯಿರಿ.

10. ಒಂದು ಕೊಡೆಯು ಸಮ ಅಂತರದಲ್ಲಿ 8 ಕಡ್ಡಿಗಳನ್ನು ಹೊಂದಿದೆ. ( ಚಿತ್ರ 5.13 ನ್ನು ನೋಡಿ ) ಕೊಡೆಯು 45 cm ತ್ರಿಜ್ಯವಿರುವ ಚಪ್ಪಟೆಯಾದ ವೃತ್ತ ಎಂದು ಭಾವಿಸಿ, ಎರಡು ಅನುಕ್ರಮ ಕಡ್ಡಿಗಳ ನಡುವಿನ ವಿಸ್ತೀರ್ಣವನ್ನು ಕಂಡುಹಿಡಿಯಿರಿ.

11. ಒಂದು ಕಾರಿಗೆ ಒಂದರ ಮೇಲೊಂದು ಅತಿಕ್ರಮಿಸದಂತಿರುವ ಎರಡು ಗಾಜೊರೆಸುವ ಉಪಕರಣಗಳಿವೆ. ಪ್ರತಿಯೊಂದು ಗಾಜೊರಸುವ ಉಪಕರಣವು 25 cm ಉದ್ದದ ಬ್ಲೇಡನ್ನು ಹೊಂದಿದ್ದು, ಇದು 1150 ಕೋನದಲ್ಲಿ ಒರೆಸುತ್ತದೆ. ಬ್ಲೇಡ್‌ ಗಳು ಒಂದು ಬಾರಿ ಜಾರಿದಾಗ ಸ್ವಚ್ಛಗೊಳಿಸುವ ಭಾಗದ ವಿಸ್ತೀರ್ಣವನ್ನು ಕಂಡುಹಿಡಿಯಿರಿ.

12. ನೀರಿನ ಒಳಭಾಗದಲ್ಲಿರುವ ಬಂಡೆಗಳ ಬಗ್ಗೆ ಎಚ್ಚರಿಸಲು ಒಂದು ದೀಪಸ್ತಂಭವು 800 ಕೋನವಿರುವ ತ್ರಿಜ್ಯಾಂತರ ಖಂಡದಲ್ಲಿ 16.5 km ದೂರಕ್ಕೆ ಕೆಂಪು ಬೆಳಕನ್ನು ಹರಡುತ್ತದೆ. ಹಡಗುಗಳನ್ನು ಎಚ್ಚರಿಸುವ ಈ ಭಾಗದ ವಿಸ್ತೀರ್ಣವನ್ನು ಕಂಡುಹಿಡಿಯಿರಿ.

13. ಚಿತ್ರ 514 ರಲ್ಲಿ ತೋರಿಸಿರುವಂತೆ ಒಂದು ದುಂಡು ಮೇಜಿನ ಹೊದಿಕೆಯು ಆರು ಸಮವಿನ್ಯಾಸಗಳನ್ನು ಹೊಂದಿದೆ. ಹೊದಿಕೆಯ ತ್ರಿಜ್ಯವು 28 cm ಆದರೆ ಪ್ರತಿ ಚದರ ಮೀಟರ್‌ ಗೆ ₹0.35 ದರದಂತೆ ವಿನ್ಯಾಸ ಮಾಡಲು ತಗಲುವ ಖರ್ಚೆಷ್ಟು? (√3 = 1.7 ಎಂದು ಬಳಸಿ).

14. ಈ ಕೆಳಗಿನವುಗಳಲ್ಲಿ ಸರಿಯಾದ ಉತ್ತರಕ್ಕೆ ಗುರುತು ಹಾಕಿ: R ತ್ರಿಜ್ಯವಿರುವ ವೃತ್ತದಲ್ಲಿ p (ಡಿಗ್ರಿಗಳಲ್ಲಿ) ಕೋನವನ್ನು ಹೊಂದಿರುವ ತ್ರಿಜ್ಯಾಂತರ ಖಂಡದ ವಿಸ್ತೀರ್ಣವು

1. ಚಿತ್ರ 5.19, PQ = 24 cm, PR = 7 cm ‘0’ ವೃತ್ತಕೇಂದ್ರವಾದರೆ ಛಾಯೆಗೊಳಿಸಿದ ಭಾಗದ ವಿಸ್ತೀರ್ಣವನ್ನು ಕಂಡುಹಿಡಿಯಿರಿ.

2. ಚಿತ್ರ 5.20 ರಲ್ಲಿ, ಕೇಂದ್ರ 0 ಇರುವ ಎರಡು ಏಕಕೇಂದ್ರೀಯ ವೃತ್ತಗಳ ತ್ರಿಜ್ಯಗಳು ಕ್ರಮವಾಗಿ 7 cm ಮತ್ತು 14 cm ಇವೆ. ಮತ್ತು ∠AOC = 40° ಆದರೆ ಚಿತ್ರದಲ್ಲಿ ಛಾಯಕೃತ ಭಾಗದ ವಿಸ್ತೀರ್ಣವನ್ನು ಕಂಡುಹಿಡಿಯಿರಿ.

3. ಚಿತ್ರ 5.21 ರಲ್ಲಿ, ABCD ಯು 14 cm ಬಾಹುವುಳ್ಳ ಚೌಕವಾಗಿದೆ ಮತ್ತು APD ಹಾಗೂ APC ಗಳು ಅರ್ಧವೃತ್ತಗಳಾದರೆ, ಛಾಯೆಗೊಳಿಸಿದ ಭಾಗದ ವಿಸ್ತೀರ್ಣವನ್ನು ಕಂಡುಹಿಡಿಯಿರಿ.

4. ಚಿತ್ರ 5.22 ರಲ್ಲಿ, 12 cm ಬಾಹುವಿರುವ ಸಮಬಾಹು ತ್ರಿಭುಜ OAB ಯ ಶೃಂಗ `O’ ವನ್ನು ಕೇಂದ್ರವಾಗಿಟ್ಟುಕೊಂಡು 6 m ತ್ರಿಜ್ಯವಿರುವ ಒಂದು ವೃತ್ತಕಾರದ ಕಂಸವನ್ನು ಎಳೆದಿದೆ. ಛಾಯೆಗೊಳಿಸಿದ ಭಾಗದ ವಿಸ್ತೀರ್ಣವನ್ನು ಕಂಡುಹಿಡಿಯಿರಿ.

5. ಚಿತ್ರ 5.23 ರಲ್ಲಿ ತೋರಿಸಿರುವಂತೆ, 4 cm ಬಾಹುವುಳ್ಳ ಒಂದು ಚೌಕದ ಪ್ರತಿ ಮೂಲೆಯಲ್ಲಿ 1 cm ತ್ರಿಜ್ಯವಿರುವ ವೃತ್ತ ಚತುರ್ಥಕವನ್ನು ಮತ್ತು 2 cm ವ್ಯಾಸವಿರುವ ಒಂದು ವೃತ್ತವನ್ನು ಕತ್ತರಿಸಿದೆ. ಚೌಕದ ಉಳಿದ ಭಾಗದ ವಿಸ್ತೀರ್ಣವನ್ನು ಕಂಡುಹಿಡಿಯಿರಿ.

6. ಚಿತ್ರ 5.24 ರಲ್ಲಿ ತೋರಿಸಿರುವಂತೆ. 32 cm ತ್ರಿಜ್ಯವಿರುವ ವೃತ್ತಾಕಾರದ ಮೇಜಿನ ಹೊದಿಕೆಯಲ್ಲಿ ಒಂದು ಸಮಬಾಹು ತ್ರಿಭುಜವನ್ನು ಮಧ್ಯದಲ್ಲಿ ಬಿಟ್ಟು ಉಳಿದ ಭಾಗದಲ್ಲಿ ಒಂದು ವಿನ್ಯಾಸವನ್ನು ಮಾಡಿದೆ. ವಿನ್ಯಾಸದ ವಿಸ್ತೀರ್ಣವನ್ನು ಕಂಡುಹಿಡಿಯಿರಿ.

ಉತ್ತರ:

ΔADB ಯಲ್ಲಿ

7. ಚಿತ್ರ 5.25 ರಲ್ಲಿ, ABCD ಚೌಕದ ಬಾಹುವಿನ ಉದ್ದ 14 cm. ಪ್ರತಿ ವೃತ್ತವು ಉಳಿದ ಮೂರು ವೃತ್ತಗಳಲ್ಲಿ ಎರಡನ್ನು ಬಾಹ್ಯವಾಗಿ ಸ್ಪರ್ಶಿಸುವಂತೆ A, B, C ಮತ್ತು D ಕೇಂದ್ರವಾಗಿರುವ ನಾಲ್ಕು ವೃತ್ತಿಗಳನ್ನು ಎಳೆದಿದೆ. ಛಾಯೆಗೊಳಿಸಿದ ಭಾಗದ ವಿಸ್ತೀರ್ಣವನ್ನು ಕಂಡುಹಿಡಿಯಿರಿ.

8. ಚಿತ್ರ 5.26 ರಲ್ಲಿ, ಎಡಭಾಗ ಮತ್ತು ಬಲಭಾಗದ ತುದಿಗಳ ಅರ್ಧವೃತ್ತಾಕಾರದಲ್ಲಿರುವ ಓಟದ ಪಥವನ್ನು ಚಿತ್ರಿಸಲಾಗಿದೆ.

ಎರಡು ಒಳ ಸಮಾಂತರ ರೇಖಾಖಂಡಗಳ ನಡುವಿನ ದೂರ 60 m ಮತ್ತು ಅವು ಪ್ರತಿಯೊಂದು 106 m ಉದ್ದವಿದೆ. ಓಟದ ಪಥವು 10 m ಆಗಲವಿದ್ದರೆ

i) ಅದರ ಒಳ ಅಂಚಿನ ಸುತ್ತಲೂ ಓಟದ ಪಥದ ದೂರ

ii) ಓಟದ ಪಥದ ವಿಸ್ತೀರ್ಣವನ್ನು ಕಂಡುಹಿಡಿಯಿರಿ.

9. ಚಿತ್ರ 5.27 ರಲ್ಲಿ, 0 ಕೇಂದ್ರವಿರುವ ವೃತ್ತದಲ್ಲಿ AB ಮತ್ತು CD ಗಳು ಪರಸ್ಪರ ಲಂಬವಾಗಿರುವ ವ್ಯಾಸಗಳಾಗಿವೆ. OD ಯು ಚಿಕ್ಕ ವೃತ್ತಕ್ಕೆ ವ್ಯಾಸವಾಗಿದೆ. OA = 7 cm ಆದರೆ ಛಾಯೆಗೊಳಿಸಿದೆ. ಭಾಗದ ವಿಸ್ತೀರ್ಣವನ್ನು ಕಂಡುಹಿಡಿಯಿರಿ.

10. ABC ಸಮಬಾಹು ತ್ರಿಭುಜದ ವಿಸ್ತೀರ್ಣವು 17320.5 cm² ಆಗಿದೆ. ಪ್ರತಿ ತ್ರಿಭುಜದ ಶೃಂಗ ಬಂದುಗಳನ್ನು ಕೇಂದ್ರವಾಗಿಟ್ಟುಕೊಂಡು ಹಾಗು ತ್ರಿಭುಜದ ಬಾಹುವಿನ ಅರ್ಧದಷ್ಟು ತ್ರಿಜ್ಯದಿಂದ ಒಂದೊಂದು ವೃತ್ತವನ್ನು ಎಳೆದಿದೆ. (ಚಿತ್ರ 5.28 ನೋಡಿ), ಛಾಯೆಗೊಳಿಸಿದ ಭಾಗದ ವಿಸ್ತೀರ್ಣವನ್ನು ಕಂಡುಹಿಡಿಯಿರಿ. ( π = 3.14 ಮತ್ತು √3 = 1.73205 ಎಂದು ಬಳಸಿ)

11. ಒಂದು ಚೌಕಾಕಾರದ ಕರವಸ್ತ್ರದಲ್ಲಿ, 7 cm ತ್ರಿಜ್ಯವನ್ನು ಹೊಂದಿರುವ ಒಂಬತ್ತು ವೃತ್ತಾಕಾರದ ವಿನ್ಯಾಸಗಳನ್ನು ಮಾಡಿದ್ದಾರೆ. (ಚಿತ್ರ 5.29 ನೋಡಿ). ಕರವಸ್ತ್ರದ ಉಳಿದ ಭಾಗದ ವಿಸ್ತೀರ್ಣವನ್ನು ಕಂಡುಹಿಡಿಯಿರಿ.

12. 5.30 ಚಿತ್ರದಲ್ಲಿ, OACB ಯು 0 ಕೇಂದ್ರವನ್ನು ಹೊಂದಿರುವ ಮತ್ತು 3.5 cm ತ್ರಿಜ್ಯವಿರುವ ವೃತ್ತದ ಚತುರ್ಥಕವಾಗಿದೆ. OD=2 cm ಆದರೆ (i) ವೃತ್ತ ಚತುರ್ಥಕ (ii) ಛಾಯೆಗೊಳಿಸಿರುವ ಭಾಗದ ವಿಸ್ತೀರ್ಣವನ್ನು ಕಂಡುಹಿಡಿಯಿರಿ.

13. ಚಿತ್ರ 5.31 ರಲ್ಲಿ, OABC ಚೌಕವು OPBQ ವೃತ್ತ ಚತುರ್ಥಕದಲ್ಲಿ ಅಂತಸ್ಥವಾಗಿದೆ. OA = 20 cm ಆದರೆ ಛಾಯಗೊಳಿಸಿದ ಭಾಗದ ವಿಸ್ತೀರ್ಣವನ್ನು ಕಂಡುಹಿಡಿಯಿರಿ. ( π = 314 ಎಂದು ಬಳಸಿ).

14. ತ್ರಿಜ್ಯ 21 cm 7 cm ಇರುವ ‘0’ ಕೇಂದ್ರವಿರುವ ಎರಡು ಏಕಕೇಂದ್ರೀಯ ವೃತ್ತಗಳ ಕಂಸಗಳು AB ಮತ್ತು CD (ಚಿತ್ರ 5.32 ನ್ನು ನೋಡಿ). ∠AOB = 30° ಆದರೆ, ಚಿತ್ರದಲ್ಲಿ ಛಾಯೆಗೊಳಸಿದ ಭಾಗದ ವಿಸ್ತೀರ್ಣವನ್ನು ಕಂಡುಹಿಡಿಯಿರಿ.

15. ಚಿತ್ರ 5.33 ರಲ್ಲಿ, ABC ಯು 14 cm ತ್ರಿಜ್ಯವುಳ್ಳ ವೃತ್ತ ಚತುರ್ಥಕವಾಗಿದೆ ಮತ್ತು BC ವ್ಯಾಸವಾಗಿರುವಂತೆ ಒಂದು ಅರ್ಧವೃತ್ತವನ್ನು ಎಳೆದಿದೆ. ಭಾಯಗೊಳಿಸಿದ ಭಾಗದ ವಿಸ್ತೀರ್ಣವನ್ನು ಕಂಡುಹಿಡಿಯಿರಿ.

16. ಚಿತ್ರ 5.34 ರಲ್ಲಿ, 8 cm ತ್ರಿಜ್ಯವನ್ನು ಹೊಂದಿರುವ ಎರಡು ವೃತ್ತ ಚತುರ್ಥಕಗಳ ನಡುವಿನ ಸಾಮಾನ್ಯ ವಲಯದ ವಿನ್ಯಾಸವನ್ನು ಕಂಡುಹಿಡಿಯಿರಿ.

6. ಒಂದು ವೃತ್ತದ ಎರಡು ತ್ರಿಜ್ಯಗಳು ಮತ್ತು ಅದರ ಅನುರೂಪ ಕಂಸದಿಂದ ಆವೃತ್ತವಾದ ವೃತ್ತಾಕಾರದಲ್ಲಿನ ಒಂದು ಭಾಗವನ್ನು ‘ತ್ರಿಜ್ಯಾಂತರ ಖಂಡ’ ಎಂದು ಕರೆಯುತ್ತೇವೆ.

7. ಅಧಿಕ ತ್ರಿಜ್ಯಾಂತರ ಖಂಡದ ಕೋನವು 3600 ∠AOB

8. ಒಂದು ಜ್ಯಾ ಹಾಗೂ ಅದರ ಅನುರೂಪ ಕಂಸದಿಂದ ಆವೃತ್ತವಾದ ವೃತ್ತಾಕಾರದ ಭಾಗವನ್ನು ‘ವೃತ್ತಖಂಡ’ ಎನ್ನುತ್ತಾರೆ.

9. ನಾವು ಅನ್ಯಥಾ ಹೇಳದ ಹೊರತು ‘ವೃತ್ತ ಖಂಡ’ ಮತ್ತು ‘ತ್ರಿಜ್ಯಾಂತರ ಖಂಡ’ ಎಂದು ಬರೆದರೆ ಅದು ‘ಲಘು ವೃತ್ತ ಖಂಡ’ ಮತ್ತು ‘ಲಘು ತ್ರಿಜ್ಯಾಂತರ ಖಂಡ’ ಎಂದು ಕ್ರಮವಾಗಿ ಅರ್ಥೈಸಿಕೊಳ್ಳಬೇಕು.

Leave a Reply

Your email address will not be published. Required fields are marked *