10th Standard Trikonamitiya Kelavu Anvayagalu Maths Notes Question Answer Guide Extract Mcq Pdf Download Kannada Medium Karnataka State Syllabus 2025, 10th maths notes kannada medium,10ನೇ ತರಗತಿ ಗಣಿತ ತ್ರಿಕೋನಮಿತಿಯ ಕೆಲವು ಅನ್ವಯಗಳು ನೋಟ್ಸ್ ಪ್ರಶ್ನೋತ್ತರಗಳು,10th standard maths chapter 6 notes kannada medium, 10th class maths 12th lesson notes state syllabus, kseeb solutions for class 10 maths chapter 12 notes, 10ನೇ ತರಗತಿ ಗಣಿತ ನೋಟ್ಸ್ sslc maths 12th lesson notes.

10ನೇ ತರಗತಿ ಗಣಿತ ತ್ರಿಕೋನಮಿತಿಯ ಕೆಲವು ಅನ್ವಯಗಳು ನೋಟ್ಸ್
ಅಭ್ಯಾಸ 12.1
1. ಒಬ್ಬ ಸರ್ಕಸಿನ ಕಲಾವಿದನು ನೇರ ಸ್ತಂಭದಿಂದ ಹಿಗ್ಗಿಸಿ ನೆಲಕ್ಕೆ ಕಟ್ಟಿರುವ 20m ಉದ್ದದ ಹಗ್ಗದ ಮೇಲೆ ಹತ್ತುತ್ತಿದ್ದಾನೆ. ನೆಲದೊಂದಿಗೆ ಹಗ್ಗದ ನಡುವಿನ ಕೋನವು 300 ಆದರೆ, ಸ್ತಂಭದ ಎತ್ತರವನ್ನು ಕಂಡುಹಿಡಿಯಿರಿ (ಚಿತ್ರ 12.11).
ಉತ್ತರ:


2. ಬಿರುಗಾಳಿಗೆ ಸಿಕ್ಕಿ ಒಂದು ಮರವು ಮುರಿದು, ನೆಲಕ್ಕೆ ತಾಗಿದಾಗ ನೆಲದೊಂದಿಗೆ 300 ಕೋನವನ್ನು ಉಂಟುಮಾಡಿದೆ ಮತ್ತು ಮರದ ತುದಿಯು ಮರದ ಬುಡದಿಂದ 8m ದೂರದಲ್ಲಿ ನೆಲಕ್ಕೆ ತಾಗಿದೆ. ಹಾಗಾದರೆ ಮುರಿದು ಬೀಳುವ ಮುನ್ನ ಮರದ ಎತ್ತರ ಎಷ್ಟಿತ್ತೆಂದು ಕಂಡುಹಿಡಿಯಿರಿ.
ಉತ್ತರ:



3. ಗುತ್ತಿಗೆದಾರರೊಬ್ಬರು ಉದ್ಯಾನವನದಲ್ಲಿ ಮಕ್ಕಳಿಗಾಗಿ ಎರಡು ಜಾರುಬಂಡೆಗಳನ್ನು ಸ್ಥಾಪಿಸಲು ಯೋಜಿಸುತ್ತಾರೆ. 5 ವರ್ಷದ ಕೆಳಗಿನ ಮಕ್ಕಳಿಗೆ ಇಳಿಜಾರು ಸುಮಾರು 1.5m ಎತ್ತರ ಮತ್ತು ನೆಲಕ್ಕೆ 300 ಓರೆ ಕೋನ ಉಂಟಾಗುವಂತೆ ಹಾಗೂ ಹಿರಿಯ ಮಕ್ಕಳಿಗೆ ಜಾರುಬಂಡೆ ಸುಮಾರು ಘಟಕ 3m ಎತ್ತರ ಹಾಗೂ ನೆಲಕ್ಕೆ 600 ಓರೆಯಾಗಿರುವಂತೆ ಸ್ಥಾಪಿಸಲು ಇಷ್ಟಪಡುತ್ತಾರೆ. ಹಾಗಾದರೆ ಈ ಎರಡೂ ಸಂದರ್ಭಗಳಲ್ಲಿ ಜಾರುಬಂಡೆಯ ಉದ್ದವೆಷ್ಟು?
ಉತ್ತರ:



4. ಗೋಪುರದ ಪಾದದಿಂದ 30m ದೂರದ ನೆಲದ ಮೇಲಿನ ಒಂದು ಬಿಂದುವಿನಿಂದ ಗೋಪುರದ ತುದಿಯನ್ನು ನೋಡಿದಾಗ ಉಂಟಾಗುವ ಉನ್ನತ ಕೋನವು 300 ಆದರೆ, ಗೋಪುರದ ಎತ್ತರವನ್ನು ಕಂಡುಹಿಡಿಯಿರಿ.
ಉತ್ತರ:



5. ಗಾಳಿಪಟವೊಂದು ನೆಲದ ಮೇಲಿನಿಂದ 60m ಎತ್ತರದಲ್ಲಿ ಹಾರಾಡುತ್ತಿದೆ. ಇದಕ್ಕೆ ಕಟ್ಟಲಾದ ದಾರವನ್ನು ತಾತ್ಕಲಿಕವಾಗಿ ನೆಲದ ಮೇಲಿನ ಒಂದು ಬಿಂದುವಿನಲ್ಲಿನ ಗೂಟಕ್ಕೆ ಕಟ್ಟಿದೆ. ದಾರವು ನೆಲದೊಂದಿಗೆ 600 ಯ ಕೋನವನ್ನು ಉಂಟುಮಾಡಿದೆ. ದಾರವು ಸಡಿಲವಾಗಿಲ್ಲವೆಂದು ಭಾವಿಸಿ, ದಾರದ ಉದ್ದವನ್ನು ಕಂಡುಹಿಡಿಯಿರಿ.
ಉತ್ತರ:


6. 1.5m ಎತ್ತರದ ಹುಡುಗನೊಬ್ಬ 30m ಎತ್ತರದ ಕಟ್ಟಡದಿಂದ ಸ್ವಲ್ಪ ದೂರದಲ್ಲಿ ನಿಂತಿದ್ದಾನೆ. ಕಟ್ಟಡದ ಹತ್ತಿರಕ್ಕೆ ನೆಡೆದು ಹೋಗುವಾಗ ಕಟ್ಟಡದ ಮೇಲ್ತುದಿಗೆ ಅವನ ಕಣ್ಣಿನಿಂದ ಉಂಟಾದ ಉನ್ನತ ಕೋನವು 300 ಯಿಂದ 600ಗೆ ಹೆಚ್ಚುತ್ತದೆ. ಹಾಗಾದರೆ ಅವನು ಕಟ್ಟಡದ ಕಡೆಗೆ ಎಷ್ಟು ದೂರ ನೆಡೆದು ಬಂದಿದ್ದಾನೆ?
ಉತ್ತರ:




7. 20m ಎತ್ತರದ ಕಟ್ಟಡವೊಂದರ ಮೇಲೆ ಸ್ಥಾಪಿಸಲಾದ ಪ್ರಸರಣೆಯ ಗೋಪುರವೊಂದರ (transmission tower) ಮೇಲ್ತುದಿ ಮತ್ತು ಪಾದಗಳ ನೆಲದ ಮೇಲಿನ ಒಂದು ಬಿಂದುವಿನಿಂದ ನೋಡಿದಾಗ ಉನ್ನತ ಕೋನಗಳು ಕ್ರಮವಾಗಿ 600 ಮತ್ತು 450 ಇದೆ. ಪ್ರಸರಣೆಯ ಗೋಪುರದ ಎತ್ತರ ಕಂಡುಹಿಡಿಯಿರಿ.
ಉತ್ತರ:




8. 1.6m ಎತ್ತರದ ಪ್ರತಿಮೆಯೊಂದನ್ನು ಒಂದು ಪೀಠದ ಮೇಲ್ಬಾಗದಲ್ಲಿ ಇರಿಸಲಾಗಿದೆ. ನೆಲದ ಮೇಲಿನ ಒಂದು ಬಿಂದುವಿನಿಂದ ಪ್ರತಿಮೆಯ ಮೇಲ್ತುದಿಯ ಉನ್ನತ ಕೋನವು 600 ಮತ್ತು ಅದೇ ಬಿಂದುವಿನಿಂದ ಪೀಠದ ಮೇಲ್ತುದಿಯ ಉನ್ನತ ಕೋನವು 450 ಆಗಿದೆ. ಪೀಠದ ಎತ್ತರವನ್ನು ಕಂಡುಹಿಡಿಯಿರಿ.
ಉತ್ತರ:



9. ಗೋಪುರದ ಪಾದದಿಂದ ಕಟ್ಟಡವೊಂದರ ಮೇಲ್ತುದಿಯನ್ನು ನೋಡಿದಾಗ ಉನ್ನತ ಕೋನವು 300 ಮತ್ತು ಕಟ್ಟದದ ಪಾದದಿಂದ ಗೋಪುರದ ಮೇಲ್ತುದಿಗೆ ಉನ್ನತ ಕೋನವು 60 ಇದೆ. ಗೋಪುರದ ಎತ್ತರ 50m ಇದ್ದರೆ, ಕಟ್ಟಡದ ಎತ್ತರ ಕಂಡುಹಿಡಿಯಿರಿ.
ಉತ್ತರ:


10. 80 ಅಡಿ ಅಗಲವುಳ್ಳ ರಸ್ತೆಯ ಎರಡು ಬದಿಗಳಲ್ಲಿ ಒಂದೇ ಎತ್ತರವಿರುವ 2 ಕಂಬಗಳು ಅಭಿಮುಖವಾಗಿ ನಿಂತಿವೆ. ರಸ್ತೆಯ ಮೇಲಿನ ಒಂದು ಬಿಂದುವಿನಿಂದ, ಕಂಬದ ಮೇಲ್ತುದಿಗಳ ಉನ್ನತ ಕೋನಗಳು ಕ್ರಮವಾಗಿ 600 ಮತ್ತು 300 ಆಗಿದೆ. ಕಂಬಗಳ ಎತ್ತರವನ್ನು ಮತ್ತು ಕಂಬಗಳಿಂದ ರಸ್ತೆಯ ಮೇಲಿನ ಬಿಂದುವಿಗಿರುವ ದೂರವನ್ನು ಕಂಡುಹಿಡಿಯಿರಿ.
ಉತ್ತರ:



11. ಒಂದು ಕಾಲುವೆಯ ದಡದ ಮೇಲೆ ದೂರದರ್ಶನದ ಗೋಪುರವೊಂದು ನೇರವಾಗಿ ನಿಂತಿದೆ. ಗೋಪುರಕ್ಕೆ ಅಭಿಮುಖವಾದ ಮತ್ತೊಂದು ದಡದ ಮೇಲಿನ ಬಿಂದುವಿನಿಂದ, ಗೋಪುರದ ಮೇಲ್ತುದಿಗೆ ಉನ್ನತ ಕೋನವು 600 ಆಗಿದೆ. ಇದೇ ಬಿಂದುವಿನಿಂದ ಗೋಪುರದ ಪಾದವನ್ನು ಸೇರಿಸುವಂತೆ ಎಳೆದ ಸರಳರೇಖೆಯ ಮೇಲಿನ 20m ದೂರದ ಮತ್ತೊಂದು ಬಿಂದುವಿನಿಂದ ಗೋಪುರದ ಮೇಲ್ತುದಿಗೆ ಉನ್ನತ ಕೋನವು 300 ಆಗಿದೆ (ಚಿತ್ರ 12.12 ನೋಡಿ). ಗೋಪುರದ ಎತ್ತರವನ್ನು ಮತ್ತು ಕಾಲುವೆಯ ಅಗಲವನ್ನು ಕಂಡುಹಿಡಿಯಿರಿ.
ಉತ್ತರ:





12. 7m ಎತ್ತರದ ಕಟ್ಟಡಮೇಲಿನ ಒಂದು ಬಿಂದುವಿನಿಂದ ಗೋಪುರದ ಮೇಲ್ತುದಿಗೆ ಉನ್ನತ ಕೋನವು 600 ಮತ್ತು ಅದರ ಪಾದಕ್ಕೆ ಅವನತ ಕೋನವು 450 ಆಗಿದೆ. ಗೋಪುರದ ಎತ್ತರ ಕಂಡುಹಿಡಿಯಿರಿ.
ಉತ್ತರ:



13. ಸಮುದ್ರ ಮಟ್ಟದಿಂದ 75m ಎತ್ತರದಲ್ಲಿರುವ ದೀಪಸ್ತಂಭವೊಂದರ ಮೇಲಿನಿಂದ ಎರಡು ಹಡಗುಗಳನ್ನು ನೋಡಿದಾಗ ಉಂಟಾದ ಅವನತ ಕೋನಗಳು ಕ್ರಮವಾಗಿ 30° ಮತ್ತು 45° ಆಗಿದೆ. ದೀಪಸ್ತಂಭದ ಒಂದೇ ಪಾರ್ಶ್ವದಲ್ಲಿ ಒಂದು ಹಡಗಿನ ಹಿಂದೆ ಮತ್ತೊಂದಿದ್ದರೆ ಎರಡು ಹಡಗುಗಳಿಗಿರುವ ದೂರವನ್ನು ಕಂಡುಹಿಡಿಯಿರಿ.
ಉತ್ತರ:



14. 1.2m ಎತ್ತರದ ಹುಡುಗಿಯು ಕ್ಷಿತಿಜ ರೇಖೆಯಲ್ಲಿ 88.2m ಎತ್ತರದಲ್ಲಿ ಬಲೂನ್ಗಳೆರಡು ಗಾಳಿಯಲ್ಲಿ ತೇಲುತ್ತಿರುವುದನ್ನು ಗುರುತಿಸುತ್ತಾಳೆ. ಒಂದು ಸಮಯದಲ್ಲಿ ಹುಡುಗಿಯ ಕಣ್ಣಿನಿಂದ ಬಲೂನ್ಗೆ ಉಂಟಾದ ಉನ್ನತ ಕೋನವು 600 ಸ್ವಲ್ಪ ಸಮಯದ ನಂತರ ಉನ್ನತ ಕೋನವು 300 ಆಗುತ್ತದೆ (ಚಿತ್ರ 12.13 ನೋಡಿ). ಈ ಸಮಯದ ಅಂತರದಲ್ಲಿ ಬಲೂನ್ ಚಲಿಸಿದ ದೂರವೆಷ್ಟು?
ಉತ್ತರ:




15. ಒಂದು ನೇರ ಹೆದ್ದಾರಿಯೂ ಗೋಪುರದ ಪಾದಕ್ಕೆ ದಾರಿಯಾಗಿದೆ. ಗೋಪುರದ ಮೇಲೆ ನಿಂತ ವ್ಯಕ್ತಿಯೊಬ್ಬರು ಏಕರೂಪ ಜವದಲ್ಲಿ ಬರುತ್ತಿರುವ ಕಾರೊಂದನ್ನು ನೋಡುತ್ತಾರೆ. ಕಾರಿನ ಅವನತ ಕೋನವು 300 ಆಗಿದೆ. 6 ಸೆಕೆಂಡುಗಳ ನಂತರ ಕಾರಿನ ಅವನತ ಕೋನವು 600 ಆಗುತ್ತದೆ. ಈ ಬಿಂದುವಿನಿಂದ ಗೋಪುರದ ಪಾದಕ್ಕೆ ಬರಲು ಕಾರು ತೆಗೆದುಕೊಳ್ಳುವ ಸಮಯವೆಷ್ಟು?
ಉತ್ತರ:




16. ಗೋಪುರವೊಂದರ ಪಾದದಿಂದ 4m ಮತ್ತು 6m ದೂರದಲ್ಲಿ ಒಂದೇ ಸರಳರೇಖೆಯ ಮೇಲಿನ ಬಿಂದುಗಳ ಮೇಲಿನ ಬಿಂದುವಿನಿಂದ ಗೋಪುರದ ಮೇಲ್ತುದಿಗೆ ಉನ್ನತ ಕೋನಗಳು ಪರಸ್ಪರ ಪೂರಕಗಳಾಗಿವೆ. ಗೋಪುರದ ಎತ್ತರವು 6m ಎಂದು ಸಾಧಿಸಿ.
ಉತ್ತರ:




ನೆನಪಿನಲ್ಲಿಡ ಬೇಕಾದ ಅಂಶಗಳು
1. ವೀಕ್ಷಿಸುತ್ತಿರುವ ಒಂದು ಬಿಂದುವು ಕ್ಷಿತಿಜ ಮಟ್ಟದಿಂದ ಮೇಲಿದ್ದರೆ, ಅಂದರೆ ಒಂದು ವಸ್ತುವನ್ನು ನೋಡಲು ನಮ್ಮ ತಲೆಯನ್ನು ಮೇಲೆತ್ತಿದ ಸಂದರ್ಭದಲ್ಲಿ, ದೃಷ್ಟಿರೇಖೆ ಮತ್ತು ಅಡ್ಡರೇಖೆಯ ನಡುವೆ ಏರ್ಪಟ್ಟ ಕೋನವನ್ನು, ವೀಕ್ಷಿಸುತ್ತಿರುವ ಬಿಂದುವಿನ ಉನ್ನತ ಕೋನ ಎನ್ನುತ್ತೇವೆ.
2. ದೃಷ್ಟಿ ರೇಖೆಯು ವೀಕ್ಷಕನ ಕಣ್ಣಿನಿಂದ, ವೀಕ್ಷಕನು ಗಮನಿಸುತ್ತಿರುವ ವಸ್ತುವಿನ ಮೇಲಿನ ಒಂದು ಬಿಂದುವನ್ನು ಸೇರಿಸುವಂತೆ ಎಳೆದ ರೇಖೆಯಾಗಿದೆ.
3. ಒಂದು ವಸ್ತುವಿನ ಎತ್ತರ ಮತ್ತು ಉದ್ದ ಅಥವಾ ಎರಡು ವಸ್ತುಗಳ ನಡುವಿನ ದೂರವನ್ನು ತ್ರಿಕೋನಮಿತಿ ಅನುಪಾತಗಳ ಸಹಾಯದಿಂದ ಕಂಡುಹಿಡಿಯಬಹುದು.
4. ವೀಕ್ಷಿಸುತ್ತಿರುವ ಒಂದು ಬಿಂದುವು ಕ್ಷಿತಿಜ ಮಟ್ಟದಿಂದ ಕೆಳಗಿದ್ದರೆ, ಅಂದರೆ ಒಂದು ವಸ್ತುವನ್ನು ನೋಡಲು ನಮ್ಮ ತಲೆಯನ್ನು ಕೆಳಗಿಳಿಸಿದ ಸಂದರ್ಭದಲ್ಲಿ, ದೃಷ್ಟಿರೇಖೆ ಮತ್ತು ಅಡ್ಡರೇಖೆಯ ನಡುವೆ ಏರ್ಪಟ್ಟ ಕೋನವನ್ನು, ವೀಕ್ಷಿಸುತ್ತಿರುವ ಬಿಂದುವಿನ ಅವನತ ಕೋನ ಎನ್ನುತ್ತೇವೆ.