10ನೇ ತರಗತಿ ಗಣಿತ ವಾರ್ಷಿಕ ಪರೀಕ್ಷಾ ಪ್ರಶ್ನೆಪತ್ರಿಕೆ ಮಾರ್ಚ್‌ – 2022 | SSLC Annual Exam Question Paper 2022 (ಉತ್ತರಸಹಿತ)

SSLC Annual Exam Question Paper 2022

10ನೇ ತರಗತಿ ಗಣಿತ ವಾರ್ಷಿಕ ಪರೀಕ್ಷಾ ಪ್ರಶ್ನೆಪತ್ರಿಕೆ ಮಾರ್ಚ್‌ – 2022 (ಉತ್ತರಸಹಿತ) SSLC Annual Exam Question Paper Maths 2022 Karnataka State Syllabus sslc maths question paper 2022 karnataka sslc question papers with answers pdf maths ಗಣಿತ ಮಾದರಿ ಪ್ರಶ್ನೆ ಪತ್ರಿಕೆ 2022 10th standard maths model question paper pdf Karnataka Board SSLC Maths Model Paper 10th maths question paper karnataka state board pdf download sslc previous year question papers with answers pdf download 10th 5 year question paper

SSLC Annual Exam Question Paper 2022

I. ಈ ಕೆಳಗಿನ ಪ್ರಶ್ನೆಗಳಿಗೆ ಅಥವಾ ಆಪೂರ್ಣ ಹೇಳಿಕೆಗಳಿಗೆ ನಾಲ್ಕು ಪರ್ಯಾಯ ಉತ್ತರಗಳನ್ನು ನೀಡಲಾಗಿದೆ. ಅವುಗಳಲ್ಲಿ ಸೂಕ್ತವಾದ ಉತ್ತರವನ್ನು ಆರಿಸಿ, ಅದರ ಕ್ರಮಾಕ್ಷರದೊಡನೆ ಪೂರ್ಣ ಉತ್ತರವನ್ನು ಬರೆಯಿರಿ. 8 x 1 = 8

1. x + 2y – 4=0 ಮತ್ತು 2x + 4y – 12 = 0 ಜೋಡಿ ರೇಖೆಗಳನ್ನು ನಕ್ಷೆಯ ಮೂಲಕ ಪ್ರತಿನಿಧಿಸಿದಾಗ, ಅವು.

(A) ಭೇದಿಸುವ ರೇಖೆಗಳಾಗಿರುತ್ತವೆ

(B) ಸಮಾಂತರ ರೇಖೆಗಳಾಗಿರುತ್ತವೆ

(C) ಐಕ್ಯಗೊಳ್ಳುವ ರೇಖೆಗಳಾಗಿರುತ್ತವೆ

(D) ಲಂಬ ರೇಖೆಗಳಾಗಿರುತ್ತವೆ.

(B) ಸಮಾಂತರ ರೇಖೆಗಳಾಗಿರುತ್ತವೆ

2. 8,5,2,-1,… ಈ ಸಮಾಂತರ ಶ್ರೇಢಿಯ ಸಾಮಾನ್ಯ ವ್ಯತ್ಯಾಸ.

(A)-3 (B)-2

(C) 3 (D) 8

(A)-3

3. 2x2 = x – 7 ಇದರ ಆದರ್ಶರೂಪ

(A) 2x2 – x = – 7

(B) 2x2 + x – 7 = 0

(C) 2x2 – x + 7 = 0

(D) 2x2 + x + 7 = 0

ವಿವರಣೆ

(C) 2x2 – x + 7 = 0

4. cos (900 – 300) ಇದರ ಬೆಲೆ

(A)-1 (B) 1/2

(C) 0 (D) 1

5. ಮೂಲ ಬಿಂದುವಿನಿಂದ P (x, y) ಬಿಂದುವಿಗೆ ಇರುವ ದೂರ.

6. ಒಂದು ವೃತ್ತದ ಸ್ಪರ್ಶಕದ ಸ್ಪರ್ಶ ಬಿಂದುವಿನಲ್ಲಿ ಎಳೆದ ತ್ರಿಜ್ಯ ಮತ್ತು ಸ್ಪರ್ಶಕದ ನಡುವಿನ ಕೋನವು

(A) 300 (B) 600

(C) 900 (D) 1800

(C) 900

7. ಕೊಟ್ಟಿರುವ ಚಿತ್ರದಲ್ಲಿ ಶಂಕುವಿನ ಭಿನ್ನಕದ ಘನಫಲ.

8. ‘r’ ಮಾನ ತ್ರಿಜ್ಯವನ್ನು ಹೊಂದಿರುವ ಗೋಳದ ಮೇಲ್ಮೈ ವಿಸ್ತೀರ್ಣ

(A) πr2 ಚದರ ಮಾನಗಳು

(B) 2πr2 ಚದರ ಮಾನಗಳು

(C) 3πr2 ಚದರ ಮಾನಗಳು

(D) 4πr2 ಚದರ ಮಾನಗಳು.

(D) 4πr2 ಚದರ ಮಾನಗಳು

II. ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ 8 x 1 = 8

9. ಎರಡು ಚರಾಕ್ಷರಗಳಿರುವ ರೇಖಾತ್ಮಕ ಸಮೀಕರಣಗಳ ಜೋಡಿಯು ಅಸ್ಥಿರವಾಗಿದ್ದಾಗ, ಅವು ಎಷ್ಟು ಪರಿಹಾರಗಳನ್ನು ಹೊಂದಿರುತ್ತವೆ?

ಎರಡು ಚರಾಕ್ಷರಗಳಿರುವ ರೇಖಾತ್ಮಕ ಸಮೀಕ್ಷರಣಗಳ ಜೋಡಿಯು ಅಸ್ಥಿರವಾಗಿದ್ದಾಗ ಪರಿಹಾರವಿರುವುದಿಲ್ಲ.

10. ಒಂದು ಸಮಾಂತರ ಶ್ರೇಢಿಯಲ್ಲಿ ಮೊದಲ ಪದ ‘a’ ಮತ್ತು ಸಾಮಾನ್ಯ ವ್ಯತ್ಯಾಸ ‘d’ ಆದಾಗ, ಅದರ ‘n’ನೇ ಪದವನ್ನು ಬರೆಯಿರಿ.

an = a + (n – 1)d

11. ವರ್ಗಸಮೀಕರಣದ ಆದರ್ಶರೂಪ ಬರೆಯಿರಿ.

ವರ್ಗ ಸಮೀಕರಣದ ಆದರ್ಶ ರೂಪ ax2 + bx + c = 0 , a ≠ 0.

13. X – ಅಕ್ಷದಿಂದ (4, 3) ಬಿಂದುವಿಗೆ ಇರುವ ದೂರ

X – ಅಕ್ಷದಿಂದ (4, 3) ಬಿಂದುವಿಗೆ ಇರುವ ದೂರ 3 units

14. 6,4,2,10 ಮತ್ತು 7 ಈ ಪ್ರಾಪ್ತಾಂಕಗಳ ಮಧ್ಯಾಂಕವನ್ನು ಕಂಡುಹಿಡಿಯಿರಿ.

6,4,2,10 ಮತ್ತು 7 ರ ಮಧ್ಯಾಂಕ

ಆರೋಹಣ ಕ್ರಮ : 2, 4, 6, 7, 10

ಮಧ್ಯಾಂಕ = 6

15. “ಮೂಲ ಸಮಾನುಪಾತತೆಯ ಪ್ರಮೇಯ” ದ (ಥೇಲ್ಸ್‌ನ ಪ್ರಮೇಯ) ಹೇಳಿಕೆಯನ್ನು ಬರೆಯಿರಿ.

ಎರಡು ಸಮಕೋನಿಯ ತ್ರಿಭುಜಗಳಲ್ಲಿ ಯಾವುದೇ ಎರಡು ಅನುರೂಪ ಬಾಹುಗಳ ಅನುಪಾತವು ಯಾವಾಗಲೂ ಒಂದೇ ಆಗಿರುತ್ತದೆ.

16. ಕೊಟ್ಟಿರುವ ಚಿತ್ರದಲ್ಲಿ ಶಂಕುವಿನ ವಕ್ರಮೇಲ್ಮೈ ವಿಸ್ತೀರ್ಣವನ್ನು ಕಂಡುಹಿಡಿಯುವ ಸೂತ್ರ ಬರೆಯಿರಿ.

ಶಂಕುವಿನ ವಕ್ರ ಮೇಲೈ ವಿಸ್ತೀರ್ಣ = πrl sq. units.

III. ಈ ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ: 8 x 2 = 16

17. ಕೊಟ್ಟಿರುವ ರೇಖಾತ್ಮಕ ಸಮೀಕರಣಗಳ ಜೋಡಿಯನ್ನು ವರ್ಜಿಸುವ ವಿಧಾನದಿಂದ ಬಿಡಿಸಿ:

2x + y = 8

x – y = 1

18. 5, 8, 11,…… 30 ಈ ಸಮಾಂತರ ಶ್ರೇಢಿಯ 30ನೇ ಪದವನ್ನು ಸೂತ್ರ ಉಪಯೋಗಿಸಿ ಕಂಡುಹಿಡಿಯಿರಿ.

19. 10, 15, 20,………… ಈ ಸಮಾಂತರ ಶ್ರೇಢಿಯ ಮೊದಲ 20 ಪದಗಳ ಮೊತ್ತವನ್ನು ಸೂತ್ರ ಉಪಯೋಗಿಸಿ ಕಂಡುಹಿಡಿಯಿರಿ.

ಅಥವಾ

ಮೊದಲ 20 ಧನ ಪೂರ್ಣಾಂಕಗಳ ಮೊತ್ತವನ್ನು ಸೂತ್ರ ಉಪಯೋಗಿಸಿ ಕಂಡುಹಿಡಿಯಿರಿ.

ಅಥವಾ

ಅಥವಾ

20. x2 + 5x + 2 = 0 ಇದರ ಮೂಲಗಳನ್ನು ವರ್ಗಸಮೀಕರಣದ ಸೂತ್ರ ಉಪಯೋಗಿಸಿ ಕಂಡುಹಿಡಿಯಿರಿ.

21. x2 + 4x + 4 = 0 ವರ್ಗಸಮೀಕರಣದ ಶೋಧಕವನ್ನು ಕಂಡುಹಿಡಿದು, ಮೂಲಗಳ ಸ್ವಭಾವವನ್ನು ಬರೆಯಿರಿ.

22. A(2, 6) = B(5, 10) ಬಿಂದುಗಳ ನಡುವಿನ ದೂರವನ್ನು ದೂರ ಸೂತ್ರ ಉಪಯೋಗಿಸಿ ಕಂಡುಹಿಡಿಯಿರಿ.

ಅಥವಾ

P(3, 4) ಮತ್ತು Q(5, 6) ಬಿಂದುಗಳನ್ನು ಸೇರಿಸುವ ರೇಖಾಖಂಡದ ಮಧ್ಯಬಿಂದುವಿನ ನಿರ್ದೇಶಾಂಕಗಳನ್ನು ‘ಮಧ್ಯಬಿಂದು’ ಸೂತ್ರ ಉಪಯೋಗಿಸಿ ಕಂಡುಹಿಡಿಯಿರಿ.

ಅಥವಾ

23. 10cm ಉದ್ದವಿರುವ ಒಂದು ರೇಖಾಖಂಡವನ್ನು ಎಳೆಯಿರಿ ಮತ್ತು ಅದನ್ನು ಜ್ಯಾಮಿತಿಯ ರಚನೆಯಿಂದ 2 : 3 ಅನುಪಾತದಲ್ಲಿ ವಿಭಾಗಿಸಿ.

AB = 10cm, ಅನುಪಾತ = 2 : 3 2 + 3 = 5

24. ಕೊಟ್ಟಿರುವ ಚಿತ್ರದಲ್ಲಿ ಕೆಳಗಿನ ಬೆಲೆಗಳನ್ನು ಕಂಡುಹಿಡಿಯಿರಿ:

(i) sin θ (ii) tan α

IV. ಈ ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ: 9 x 3 = 27

25. ಒಂದು ಸಮಾಂತರ ಶ್ರೇಢಿಯ ಮೊದಲ 9 ಪದಗಳ ಮೊತ್ತವು 144 ಆಗಿದೆ. ಮತ್ತು ಇದರ 9ನೇ ಪದವು 28 ಆದಾಗ, ಈ ಸಮಾಂತರ ಶ್ರೇಢಿಯ ಮೊದಲನೆ ಪದ ಮತ್ತು ಸಾಮಾನ್ಯ ವ್ಯತ್ಯಾಸವನ್ನು ಕಂಡುಹಿಡಿಯಿರಿ.

26. ಒಂದು ಆಯತಾಕಾರದ ಮೈದಾನದ ಕರ್ಣವು ಅದರ ಚಿಕ್ಕ ಬಾಹುವಿಗಿಂದ 60m ಹೆಚ್ಚಾಗಿದೆ. ದೊಡ್ಡ ಬಾಹುವು ಆ ಚಿಕ್ಕ ಬಾಹುವಿಗಿಂತ 30m ಹೆಚ್ಚಾಗಿದ್ದರೆ, ಮೈದಾನದ ಬಾಹುಗಳ ಅಳತೆಗಳನ್ನು ಕಂಡುಹಿಡಿಯಿರಿ.

ಅಥವಾ

ಒಂದು ಲಂಬಕೋನ ತ್ರಿಭುಜದಲ್ಲಿ ವಿಕರ್ಣವು 13cm. ಉದ್ದವಿದೆ. ಉಳಿದೆರಡು ಬಾಹುಗಳಲ್ಲಿ ಒಂದು ಬಾಹುವು ಮತ್ತೊಂದು ಬಾಹುವಿಗಿಂತ 7cm ಹೆಚ್ಚಾಗಿದ್ದರೆ, ಆ ತ್ರಿಭುಜದ ಬಾಹುಗಳನ್ನು ಕಂಡುಹಿಡಿಯಿರಿ.

ಅಥವಾ

27. (sin A+cosec A)2 + (cos A + sec A)2 = 7 tan2 A + cot2 A ಎಂದು ಸಾಧಿಸಿ.

ಅಥವಾ

secθ (1 – sinθ) (secθ + tanθ) =1 ಎಂದು ಸಾಧಿಸಿ.

28. A(-1,7) ಮತ್ತು B(4,-3) ಬಿಂದುಗಳನ್ನು ಸೇರಿಸುವ ರೇಖಾಖಂಡವನ್ನು AB ಯ ಮೇಲಿನ ಒಂದು ಬಿಂದುವು 2 : 3 ಅನುಪಾತದಲ್ಲಿ ಅಂತರಿಕವಾಗಿ ವಿಭಾಗಿಸಿದರೆ, ಆ ಬಿಂದುವಿನ ನಿರ್ದೇಶಾಂಕಗಳನ್ನು ಕಂಡುಹಿಡಿಯಿರಿ.

P (0,4), Q(3, 0) ಮತ್ತು R (3,5) ಇವುಗಳನ್ನು ಶೃಂಗಗಳಾಗಿ ಹೊಂದಿರುವ PQR ತ್ರಿಭುಜದ ವಿಸ್ತೀರ್ಣವನ್ನು ಕಂಡುಹಿಡಿಯಿರಿ.

29. ಈ ಕೆಳಗಿನ ವರ್ಗೀಕೃತ ದತ್ತಾಂಶಕ್ಕೆ ಸರಾಸರಿಯನ್ನು ನೇರ ವಿಧಾನದಿಂದ ಕಂಡುಹಿಡಿಯಿರಿ:

ಅಥವಾ

ಈ ಕೆಳಗಿನ ವರ್ಗೀಕೃತ ದತ್ತಾಂಶಕ್ಕೆ ಬಹುಲಕ ಕಂಡುಹಿಡಿಯಿರಿ.

ಉತ್ತರ:

ಅಥವಾ

30. ಒಂದು ತರಗತಿಯ 50 ವಿದ್ಯಾರ್ಥಿಗಳ ವೈದ್ಯಕೀಯ ತಪಾಸಣೆಯಲ್ಲಿ ಅವರ ಎತ್ತರಗಳು ಕೆಳಗಿನಂತೆ ದಾಖಲಾದವು. ಈ ದತ್ತಾಂಶಗಳಿಗೆ ‘ಕಡಿಮೆ ವಿಧಾನ’ದ ಓಜೀವ್‌ ಎಳೆಯಿರಿ:

31. “ಬಾಹ್ಯ ಬಿಂದುವಿನಿಂದ ವೃತ್ತಕ್ಕೆ ಎಳೆದ ಸ್ಪರ್ಶಕಗಳ ಉದ್ದವು ಸಮನಾಗಿರುತ್ತೆ.” ಎಂದು ಸಾಧಿಸಿ.ಉತ್ತರ

ಪಠ್ಯ ಪುಸ್ತಕದಿಂದ ಅಭ್ಯಸಿಸಿ

32. 3cm ತ್ರಿಜ್ಯವುಳ್ಳ ವೃತ್ತಕ್ಕೆ ಅದರ ಕೇಂದ್ರದಿಂದ 8cm ದೂರದಲ್ಲಿರುವ ಒಂದು ಬಿಂದುವಿನಿಂದ ಎರಡು ಸ್ಪರ್ಶಕಗಳನ್ನು ರಚಿಸಿ.

33. ಒಂದು ನೇರ ವೃತ್ತೀಯ ಘನ ಸಿಲಿಂಡರ್‌ನ ಘನಫಲವು 2156cm3 ಆಗಿದೆ. ಸಿಲಿಂಡರ್‌ನ ಎತ್ತರ 14em ಆದರೆ, ಅದರ ವಕ್ರಮೇಲ್ಮೈ ವಿಸ್ತೀರ್ಣವನ್ನು ಕಂಡುಹಿಡಿಯಿರಿ. π = 22/7 ಎಂದು ತೆಗೆದುಕೊಳ್ಳಿ.

V. ಈ ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ: 4 x 4 = 16

34. ಕೊಟ್ಟಿರುವ ರೇಖಾತ್ಮಕ ಸಮೀಕರಣಗಳ ಜೋಡಿಯ ಪರಿಹಾರವನ್ನು ನಕ್ಷೆಯ ವಿಧಾನದಿಂದ ಕಂಡುಹಿಡಿಯಿರಿ:

x + 2y = 6

x + y = 5

35. ಗೋಪುರದ ಪಾದದಿಂದ ಕಟ್ಟಡವೊಂದರ ಮೇಲ್ತುದಿಯನ್ನು ನೋಡಿದಾಗ ಉನ್ನತ ಕೋನವು 30° ಮತ್ತು ಕಟ್ಟಡದ ಪಾದದಿಂದ ಗೋಪುರದ ಮೇಲ್ತುದಿಗೆ ಉನ್ನತ ಕೋನವು 60°. ಇದೆ. ಗೋಪುರ ಮತ್ತು ಕಟ್ಟಡಗಳು ಒಂದೇ ಸಮತಟ್ಟಾದ ನೆಲದ ಮೇಲಿವೆ. ಗೋಪುರದ ಎತ್ತರ 50m, ಆದರೆ, ಕಟ್ಟಡದ ಎತ್ತರವನ್ನು ಕಂಡುಹಿಡಿಯಿರಿ.

ಅಥವಾ

ಸಮುದ್ರಮಟ್ಟದಿಂದ 75m ಎತ್ತರದಲ್ಲಿರುವ ದೀಪಸ್ತಂಭವೊಂದರ ಮೇಲಿನಿಂದ ಎರಡು ಹಡಗುಗಳನ್ನು ನೋಡಿದಾಗ, ಉಂಟಾದ ಅವನತ ಕೋನಗಳು 30° ಮತ್ತು 45°. ಆಗಿವೆ. ದೀಪಸ್ತಂಭದ ಒಂದೇ ಪಾರ್ಶ್ವದಲ್ಲಿ ಒಂದು ಹಡಗಿನ ಹಿಂದೆ ಮತ್ತೊಂದಿದ್ದರೆ, ಆ ಎರಡು ಹಡಗುಗಳ ನಡುವಿನ ದೂರವನ್ನು ಕಂಡುಹಿಡಿಯಿರಿ.

ಅಥವಾ

36. 4.5 cm, 6 cm ಮತ್ತು 8cm. ಬಾಹುಗಳಿರುವ ಒಂದು ತ್ರಿಭುಜವನ್ನು ರಚಿಸಿ. ನಂತರ ಮತ್ತೊಂದು ತ್ರಿಭುಜವನ್ನು, ಅದರ ಪ್ರತಿಯೊಂದು ಬಾಹುವು ಮೊದಲು ರಚಿಸಿದ ತ್ರಿಭುಜದ ಅನುರೂಪ ಬಾಹುಗಳ 3/4 ರಷ್ಟಿರುವಂತೆ ರಚಿಸಿ.

37. ಕೊಟ್ಟಿರುವ ಚಿತ್ರದಲ್ಲಿ AXB ಮತ್ತು CYD ಗಳು ‘0’. ಕೇಂದ್ರವಿರುವ ಎರಡು ಏಕಕೇಂದ್ರೀಯ ವೃತ್ತಗಳ ಕಂಸಗಳಾಗಿವೆ. AXB ಕಂಸದ ಉದ್ದವು 11cm ಇದೆ. OC = 7cm ಮತ್ತು ∠AOB = 30°, ಆದರೆ ಛಾಯೀಕರಿಸಿದ ಭಾಗದ ವಿಸ್ತೀರ್ಣವನ್ನು ಕಂಡುಹಿಡಿಯಿರಿ.

VI. ಈ ಕೆಳಗಿನ ಪ್ರಶ್ನೆಗೆ ಉತ್ತರಿಸಿ: 1 x 5 = 5

38. “ಎರಡು ಸಮರೂಪ ತ್ರಿಭುಜಗಳ ವಿಸ್ತೀರ್ಣಗಳ ಅನುಪಾತವು ಅವುಗಳ ಅನುರೂಪ ಬಾಹುಗಳ ವರ್ಗಗಳ ಅನುಪಾತಕ್ಕೆ ಸಮನಾಗಿರುತ್ತದೆ” ಎಂದು ಸಾಧಿಸಿ.

ಪಠ್ಯಪುಸ್ತಕದಿಂದ ಅಭ್ಯಸಿಸಿ.

Leave a Reply

Your email address will not be published. Required fields are marked *